ಸಿಎಂ ಬಸವರಾಜ ಬೊಮ್ಮಾಯಿ ಅವರ ರೋಡ್‌ಶೋ ನಡೆಸಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕಿಚ್ಚ ಸುದೀಪ್ , ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ನಾನು ಕೆಲಸ ಆಗುವವರ ಪರ ಇರುತ್ತೇನೆ . ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ವಿದೇಶದಲ್ಲಿ ಭಾರತದ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾರೆ ಎಂದು ಮೋದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾನು ಸುಮ್ನೆ ಪ್ರಚಾರಕ್ಕೆ ಇಳಿಯಲ್ಲ. ಗೆದ್ದೆ ಗೆಲ್ಲುವೆ ಒಂದು ದಿನ. ಗೆಲ್ಲಲೇಬೇಕು ಒಳ್ಳೆಯತನ. ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಹೋಗುತ್ತೇನೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಾದರೆ ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಿಚ್ಚ ಸುದೀಪ್ ಶಿಗ್ಗಾಂವಿ ಮತದಾರರಲ್ಲಿ ಮನವಿ ಮಾಡಿದರು.