ಬಜೆಟ್ ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಕೊಡಗೆ.ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬೆಂಗಳೂರು ವೈಟ್‌ಟಾಪಿಂಗ್, ರಸ್ತೆ ಅಭಿವೃದ್ಧಿ, ರಾಜಕಾಲುವೆ ತೆರವು ಹಾಗೂ ದುರಸ್ತಿಗೆ ಅನುದಾನ, ನಗರೋತ್ಥಾನ, ತಾಜ್ಯ ನಿರ್ವಹಣೆ ಹೀಗೆ ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45000 ಕೋಟಿ ಅನುದಾನವನ್ನು ನೀಡಲಾಗಿದೆ. ಬೆಂಗಳೂರಿನಲ್ಲಿ 4-6 ಪಥದ 123 ಕಿ ಮೀ ಉದ್ದದ ಹೈಬ್ರಿಡ್ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದರೊಂದಿಗೆ ಮೆಟ್ರೋ ಮಾರ್ಗ ವಿಸ್ತರಣೆಗೆ ಯೋಜನೆ ಮಾಡಲಾಗಿದೆ. ನಮ್ಮ ಮೆಟ್ರೋ ಯೋಜನೆಗೆ 30 ಸಾವಿರ ಕೋಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ.ಸಮಾಜ ಕಲ್ಯಾಣ ಇಲಾಖೆಗೆ ಸರ್ಕಾರ 11,179 ಘೋಷಿಸಿದೆ. ಕಲಬುರಗಿ ಮತ್ತು ಮೈಸೂರು ಜಿಲ್ಲೆಯಲ್ಲಿ ಟ್ರಾಮಾ ಸೆಂಟರ್‌ನಿರ್ಮಾಣಕ್ಕೆ 30 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.