ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ರೋಸ್ ಅವೆನ್ಯೂ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು ಜುಲೈ 4 ರಂದು ವಿಚಾರಣೆ ನಡೆಯಲಿದೆ. ಚಾರ್ಜ್‌ಶೀಟ್ ನಲ್ಲಿ ಬ್ರಿಜ್ ಭೂಷಣ್ ವಿರುದ್ಧದ ಫೋಕ್ಸೊ ಪ್ರಕರಣ ರದ್ದು ಮಾಡುವಂತೆ ಪೋಲೀಸರು ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ 500 ಪುಟಗಳ ವರದಿ ನೀಡಿರುವ ಪೊಲೀಸರು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಕ್ಕೆ ಯಾವುದೇ ಸಾಕ್ಷ್ಯ – ಪುರಾವೆಗಳು ಲಭ್ಯವಾಗಿಲ್ಲ. ಆಕೆಯ ತಂದೆ ಪೋಕ್ಸೋ ಕಾಯಿದೆ ಪ್ರಕರಣದಲ್ಲಿ ದೂರುದಾರರಾಗಿ ಆರೋಪಗಳನ್ನು ಹಿಂಪಡೆದು ಮ್ಯಾಜಿಸ್ಟ್ರೇಟ್ ಮುಂದೆ ಹೊಸ ಹೇಳಿಕೆಯನ್ನು ದಾಖಲಿಸಿದ್ದಾರೆ. ಉಪ ಪೊಲೀಸ್ ಆಯುಕ್ತ ಪ್ರಣವ್ ತಯಾಲ್ ಅವರು ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅಪ್ರಾಪ್ತ ವಯಸ್ಕರು ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ಪ್ರಕರಣವನ್ನು ರದ್ದುಗೊಳಿಸುವಂತೆ ವಿನಂತಿಸಿ ವರದಿ ಸಲ್ಲಿಸಿದ್ದಾರೆ. ಆರು ಮಹಿಳಾ ಅಥ್ಲೀಟ್‌ಗಳ ಪೈಕಿ ನಾಲ್ವರು ತಮ್ಮ ಆರೋಪಗಳನ್ನು ದೃಢೀಕರಿಸಲು ಆಡಿಯೋ ಮತ್ತು ದೃಶ್ಯ ಸಾಕ್ಷ್ಯಗಳನ್ನು ಒದಗಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.