ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನವೇ ಇಂದು ಬಲಿಪಶುವಾಗಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಬಜೌರ್ ಜಿಲ್ಲೆಯಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ರ ರ್‍ಯಾಲಿ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಸ್ಫೋಟದ ಸದ್ದಿಗೆ ಇಡೀ ಪ್ರದೇಶದ ಜನರು ಬೆಚ್ಚಿಬಿದ್ದಿದ್ದಾರೆ. ಈ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸ್ಫೋಟದ ನಂತರ ಭೀಕರ ಬೆಂಕಿ ಗೋಚರಿಸುತ್ತದೆ. ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. ಇದರಲ್ಲಿ ಇದುವರೆಗೆ 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸ್ಫೋಟಗಳ ಭಯಾನಕ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಮುನ್ನೆಲೆಗೆ ಬಂದಿವೆ.