ಚೀನಾದಲ್ಲಿ ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿದ್ದರೂ ಭಾರತದಲ್ಲಿ ಲಾಕ್‌ಡೌನ್ ಮಾಡುವ ಪರಿಸ್ಥಿತಿಯಿಲ್ಲ ಶೇ.95 ರಷ್ಟು ಜನರು ಈಗಾಗಲೇ ಲಸಿಕೆಯನ್ನು ಪಡೆದಿರುವ ಕಾರಣ ಲಾಕ್‌ಡೌನ್‌ಮಾಡುವ ಪರಿಸ್ಥಿತಿ ಇಲ್ಲ. ಎಂದು ಭಾರತೀಯ ವೈದ್ಯಕೀಯ ಸಂಘದ ಡಾ ಗೋಯಲ್ ಹೇಳಿದ್ದಾರೆ. ಭಾರತೀಯರು ಚೀನಾದ ಜನರಿಗಿಂತ ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ. ಭಾರತವು ಕೋವಿಡ್‌ಮೂಲಭೂತ ಅಂಶಗಳಾದ ಪರೀಕ್ಷೆ, ಚಿಕಿತ್ಸೆ, ಪತ್ತೆಹಚ್ಚುವಿಕೆಗೆ ಮರಳಬೇಕು ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಇಲ್ಲಿಯವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,515) ದಾಖಲಾಗಿದೆ. ಒಟ್ಟು 5,30,681 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,42,432 ಕ್ಕೆ ಏರಿದೆ. ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.