ದೇಶವು ಸ್ವಾವಲಂಬಿಯಾಗಲು ಹಾಗೂ ಕೃಷಿ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಲು ಕೃಷಿ, ಪಶು ಸಂಗೋಪನೆ ಮತ್ತು ಆಹಾರ ಸಂಸ್ಕರಣೆಯನ್ನು ಆಧುನೀಕರಿಸುವ ಅವಶ್ಯಕತೆಯ ಜೊತೆಗೆ ‘ವ್ಯಾಪಾರ, ಪ್ರವಾಸೋದ್ಯಮ ಹಾಗೂ ತಂತ್ರಜ್ಞಾನದ ಅಭಿವೃದ್ಧಿಯತ್ತ ಗಮನ ಹರಿಸಿ ಆಮದಿಗೆ ಕಡಿವಾಣ ಹಾಕಬೇಕು ಹಾಗೂ ರಫ್ತಿನ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.