ಭಾರತದ ಮೋಸ್ಟ್‌ವಾಂಟೆಡ್‌ಉಗ್ರ ದಾವೂದ್ ಸಾವಿನ ವದಂತಿ: ಗುಪ್ತಚರ ಇಲಾಖೆ ಹೇಳಿದ್ದೇನು,

ಭಾರತದ ಮೋಸ್ಟ್‌ವಾಂಟೆಡ್‌ಉಗ್ರ, 93ರ ಮುಂಬೈ ಸ್ಫೋಟದ ರೂವಾರಿ ಎನ್ನಲಾದ ದಾವೂದ್‌ಇಬ್ರಾಹಿಂ ಮೃತಪಟ್ಟಿದ್ದಾನೆ ಎಂಬ ವದಂತಿ ಭಾನುವಾರ ರಾತ್ರಿಯಿಂದೀಚೆಗೆ ಜಾಲತಾಣದಲ್ಲಿ ಭಾರಿ ವೈರಲ್‌ಆಗಿತ್ತು. ಈ ವದಂತಿಗೆ ಪೂರಕವಾಗಿ ಪಾಕ್‌ನಾದ್ಯಂತ ಇಂಟರ್ನೆಟ್‌ಸ್ಥಗಿತಗೊಂಡಿದ್ದು ಜನರು ದಾವೂದ್‌ಸಾವಿನ ಸುದ್ದಿಯನ್ನು ನಂಬುವಂತೆ ಮಾಡಿತ್ತು.ಆದರೆ ಪಾಕಿಸ್ತಾನದ ಯೂಟ್ಯೂಬರ್‌ನೊಬ್ಬ ಮಾಡಿದ ಎಡವಟ್ಟಿನಿಂದ ಹಾಗೂ ಪಾಕ್‌ಹಂಗಾಮಿ ಪ್ರಧಾನಿ ಹೆಸರಲ್ಲಿನ ನಕಲಿ ಟ್ವೀಟ್‌ನಿಂದ ಇಂಥದ್ದೊಂದು ವದಂತಿ ಹಬ್ಬಿದೆ ಎಂದು ಫ್ಯಾಕ್ಟ್‌ಚೆಕ್‌ಆದ ಬಳಿಕ ಗೊತ್ತಾಗಿದೆ. ಹೀಗಾಗಿ ದಾವೂದ್‌ಸಾವಿನ ಸುದ್ದಿ ಸುಳ್ಳು ಎಂದು ಖಚಿತಪಟ್ಟಿದೆ.ದಾವೂದ್‌ಅನಾಮಿಕ ವ್ಯಕ್ತಿಗಳ ವಿಷಪ್ರಾಶನದಿಂದ ತೀವ್ರ ಅಸ್ವಸ್ಥಗೊಂಡಿದ್ದ. ಭಾನುವಾರ ಸಂಜೆ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆತನಿಗೆ ರಹಸ್ಯ ರೀತಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ರಾತ್ರಿ 8 – 9 ರ ಅವಧಿಯಲ್ಲಿ ಮೃತಪಟ್ಟಿದ್ದಾನೆ ಎಂದು ಜಾಲತಾಣಗಳಲ್ಲಿ ಸುದ್ದಿಯಾಗಿತ್ತು. ಜೊತೆಗೆ ಈ ಸುದ್ದಿ ಹರಡದಿರಲಿ ಎನ್ನುವ ಕಾರಣಕ್ಕೆ ಪಾಕ್‌ಸರ್ಕಾರ ಇಂಟರ್ನೆಟ್‌ಸೇವೆ ಸ್ಥಗಿತಗೊಳಿಸಿತ್ತು ಎಂದೂ ವರದಿಯಾಗಿತ್ತು. ಇದನ್ನು ಹಲವು ನೆಟ್ಟಿಗರು, ಕೆಲವು ಪತ್ರಕರ್ತರು ಖಚಿತಪಡಿಸಿದ್ದರು. ಜೊತೆಗೆ ದಾವೂದ್‌ಬೀಗರಾದ ಜಾವೇದ್‌ಮಿಯಾಂದಾದ್‌ಕೂಡ ಹಾರಿಕೆ ಉತ್ತರ ನೀಡಿದ್ದರು.

Leave a Reply

Your email address will not be published. Required fields are marked *