ಮೊಳಕಾಲ್ಮುರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವದ ಆರ್ಥಿಕ ಬಲಿಷ್ಠ ರಾಷ್ಟ್ರಗಳಲ್ಲಿ ಐದನೇ ಸ್ಥಾನದಲ್ಲಿರುವ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಾಹುಲ್‌ಅವರು ಇಂಗ್ಲೆಂಡ್‌ನಲ್ಲಿ ಮಾತನಾಡಿ, ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದ್ದು ಅಮೆರಿಕ ಮತ್ತು ಯೂರೋಪ್‌ರಾಷ್ಟ್ರಗಳು ಸಹಾಯಕ್ಕೆ ಬರಬೇಕೆಂದು ಕರೆ ಕೊಟ್ಟಿದ್ದಾರೆ. 1975ರಲ್ಲಿ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿ ದೇಶಭಕ್ತರನ್ನು ಜೈಲಿಗೆ ಕಳುಹಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅವಮಾನವೆಸಗಿದ್ದರು. ಅಜ್ಜಿಯ ಹಾದಿಯಲ್ಲೇ ರಾಹುಲ್‌ಗಾಂಧಿ ಸಾಗುತ್ತಿದ್ದುವಿದೇಶಿ ನೆಲದಲ್ಲಿ ಅವಮಾನಿಸಿರುವ ರಾಹುಲ್‌ಗಾಂಧಿಗೆ ತಕ್ಕ ಪಾಠ ಕಲಿಸಬೇಕಾದರೆ ಕರ್ನಾಟಕ ಕಾಂಗ್ರೆಸ್‌ಮುಕ್ತ ರಾಜ್ಯವಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಗುಡುಗಿದರು.