ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಭವಿಷ್ಯದ ಪರಿಶೋಧನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇಸ್ರೋ ಅಧ್ಯಕ್ಷ ಸೋಮನಾಥ್ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳ ಭವಿಷ್ಯದ ಕುರಿತ ಸಭೆಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳಿಗೆ ಕಾರ್ಯಾಚರಣೆಯಲ್ಲಿ ಕೆಲಸ ಮಾಡಲು ವಿಜ್ಞಾನಿಗಳಿಗೆ ಮೋದಿ ಕರೆ ನೀಡಿದ್ದಾರೆ.