ಭಾರತ್ ಜೋಡೋ ಯಾತ್ರೆ ಪ್ರತಿಯೊಂದು ಅನ್ಯಾಯದ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದ ಕಾಂಗ್ರೆಸ್‌ನಾಯಕ ರಾಹುಲ್‌ಗಾಂಧಿ, ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳ ಕೋಟ್ಯಂತರ ಸಾಲವನ್ನು ಮನ್ನಾ ಮಾಡುತ್ತಿದೆ. ಆದರೆ ಸಾಲಗಾರನೆಂದು ರೈತನನ್ನು ಜೈಲಿಗೆ ಕಳುಹಿಸಲಾಗುತ್ತದೆ .ಬಿಜೆಪಿ ಮತ್ತು ಆರ್‌ಎಸ್‌ಎಸ್‌ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ರಾಹುಲ್‌ಗಾಂಧಿ, ಭಾರತ್ ಜೋಡೋ ಯಾತ್ರೆಯನ್ನು ‘ವಿಭಜಿಸಲು’ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.