ಇಂದು ನಸುಕಿನ ಜಾವ ಮಧ್ಯ ಪ್ರಾಚ್ಯ ದೇಶಗಳಾದ ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪನದ ರೌದ್ರತೆಗೆ ಸಿಲುಕಿ ಹಲವು ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿದ ಪರಿಣಾಮ 500 ಕ್ಕೂ ಹೆಚ್ಚು ಜನ ಮಡಿದಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಹೋಗುತ್ತಿದೆ. ಭೂಕಂಪನದಿಂದ ನಲುಗಿದ ಈ ಟರ್ಕಿ ದೇಶಕ್ಕೆ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದು, ಈ ಬಗ್ಗೆ ಪ್ರಧಾನಿ ಸಚಿವಾಲಯ ಸಭೆ ನಡೆಸಿ. ಟರ್ಕಿಯಲ್ಲಿ ಸಂಭವಿಸಿದ ಭೂಕಂಪನ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆಪ್ರಧಾನಿ ನರೇಂದ್ರ ಮೋದಿ ಸೂಚಿಸಿದ ಹಿನ್ನೆಲೆ ರಕ್ಷಣಾ ಕಾರ್ಯಾಚರಣಾ ತಂಡಗಳು ಹಾಗೂ ವೈದ್ಯಕೀಯ ತಂಡಗಳು, ವೈದ್ಯಕೀಯ ಪರಿಹಾರ ಸಾಮಾಗ್ರಿಗಳನ್ನು ಟರ್ಕಿ ತುರ್ತು ಘಟನಾ ಸ್ಥಳಕ್ಕೆ ಕಳುಹಿಸಲಾಗುತ್ತಿದೆ.