ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ನಲ್ಲಿ ಬಹುಮತ ಪಡೆದಿರುವ ಬಿಜೆಪಿ ಇಂದು ಏಳನೇ ಬಾರಿಗೆ ಸರ್ಕಾರ ರಚಿಸಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಿದರು. ಸಿಎಂ ಜೊತೆ ಇಂದು ಒಟ್ಟು 16 ಮಂದಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿದರು. ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್‌ನ ಹೆಲಿಪ್ಯಾಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜೆ.ಪಿ ನಡ್ಡಾ, ಕೆಲ ಕೇಂದ್ರ ಸಚಿವರು ಭಾಗಿಯಾದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು, ಮಾಜಿ ಸಿಎಂ ಯಡಿಯೂರಪ್ಪ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಶೇಷವಾಗಿ 200 ಸಂತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.