ಮಂಗಳೂರಿನ ಬಂಗ್ರಕೂಳೂರಿನಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್‌ಸಮಾವೇಶ ಮುಗಿಸಿ ಚಹಾ ವಿರಾಮದಲ್ಲಿ ಬಿಜೆಪಿ ಕೋರ್‌ಕಮಿಟಿ ಸದಸ್ಯರಿಗೆ ಟಾಸ್ಕ್ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲಲು ಕರ್ನಾಟಕ ಬಿಜೆಪಿ ಕೋರ್‌ಕಮಿಟಿ ಸದಸ್ಯರಿಗೆ ಮೋದಿ ಅವರು ಟಾಸ್ಕ್ ನೀಡಿದ್ದಾರೆ.ಇನ್ನು ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಬಿಎಸ್‌ವೈ, ನನ್ನ ಮೇಲೆ ವಿಶ್ವಾಸವಿಟ್ಟು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ 140 ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇನೆ ರಾಜ್ಯದಲ್ಲಿ ನಮ್ಮದೇ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.