ಮಕ್ಕಳ ಕಲಿಕಾ ಕೊರತೆಯನ್ನ ನೀಗಿಸುವ ಸಲುವಾಗಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ಕ್ಲಸ್ಟರ್ ಹಂತದಲ್ಲಿ ಈ ಪರೀಕ್ಷೆಗಳನ್ನ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಶುಲ್ಕ ಪಡೆಯುವಂತಿಲ್ಲ. ಇನ್ನೂ ಪರೀಕ್ಷೆ ನಡೆಸುವಾಗ 8ನೇ ತರಗತಿಗೆ ಒಂದು ಪರೀಕ್ಷಾ ಕೇಂದ್ರಕ್ಕೆ 50 ಮಕ್ಕಳು ಇರುವಂತೆ, 5ನೇ ತರಗತಿಗೆ 25 ಮಕ್ಕಳು ಒಂದು ಕೇಂದ್ರಕ್ಕೆ ಇರುವಂತೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು.