ಮಣಿಪುರದಲ್ಲಿ ಯುವಕರ ಗುಂಪೊಂದು ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದೆ. ಆ ನಂತರ ಅವರ ಮೇಲೆ ಅತ್ಯಾಚಾರ ಎಸಗಿದೆ. 21 ಮತ್ತು 19 ವರ್ಷ ವಯಸ್ಸಿನ ಮಹಿಳೆಯರ ಮೇಲೆ ಈ ಲೈಂಗಿಕ ದೌರ್ಜನ್ಯ ನಡೆದಿದೆ.ಈ ಘಟನೆ ಮೇ 04 ರಂದು ನಡೆದಿದೆ ಎಂದು ವರದಿಯಾಗಿದೆ. ಎರಡು ತಿಂಗಳ ಹಿಂದೆ ನಡೆದ ವಿಡಿಯೊ ಕಳೆದ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ಆಗಿದೆ. ಇದು ದೇಶದಲ್ಲಿ ಅಷ್ಟೇ ಅಲ್ಲದೇ ಜಾಗತಿಕವಾಗಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ ಎಂದು ಮಣಿಪುರ ಸರ್ಕಾರ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು, ಘಟನೆಯನ್ನು ‘ಕ್ರೂರ’ ಹಾಗೂ ‘ಭಯಾನಕ’ ಎಂದು ಕರೆದಿದ್ದಾರೆ. ಭೀಕರ ದಾಳಿಗೆ ತುತ್ತಾದ ಸಂತ್ರಸ್ತರ ಜೊತೆ ಅಮೆರಿಕ ಇರಲಿದೆ ಎಂದು ತಿಳಿಸಿದ್ದಾರೆ. ಎಂದು ಸುದ್ದಿಸಂಸ್ಥೆ ‘ರಾಯಿಟರ್ಸ್’ ವರದಿ ಮಾಡಿದೆ.