ಮಧ್ಯಪ್ರದೇಶಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಿಸುವುದಕ್ಕೂ ಮುನ್ನವೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಲಾಗಿದೆ. ಮಧ್ಯಪ್ರದೇಶದ ಇಂದೋರ್‌ಗೆ ಆಗಮಿಸಿದ ತಕ್ಷಣ ಬಾಂಬ್ ಸ್ಫೋಟಿಸಿ ರಾಹುಲ್ ಗಾಂಧಿಯನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಲಾಗಿದೆ. ಇಂದೋರ್‌ನ ಸಿಹಿತಿಂಡಿ ಅಂಗಡಿಯೊಂದರ ಹೊರಗೆ ರಾಹುಲ್ ಗಾಂಧಿಯನ್ನು ಕೊಲ್ಲುವುದಾಗಿ ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ. ಹೀಗಾಗಿ ಜುನಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲಿಸರು ಈಗಾಗಲೇ ಅಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡಲು ಪ್ರಾರಂಭಿಸಿದ್ದಾರೆ ಮತ್ತು ಪತ್ರವನ್ನು ಬಿಟ್ಟುಹೋದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.