ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಅವರ ಸಂಪುಟದ ಇಬ್ಬರು ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದಿಯೋರಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಮಂಗುಭಾಯಿ ಸಿ. ಪಟೇಲ್ ಪ್ರಮಾಣವಚನ ಬೋಧಿಸಿದರು.ಹದಿನೆಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್‌ಅವರನ್ನು ಕೈ ಬಿಟ್ಟು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಗೆ ಡಾ.ಮೋಹನ್ ಯಾದವ್ ಹೆಸರನ್ನು ಪರಿಗಣಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಮೂರು ಬಾರಿ ಶಾಸಕರಾಗಿರುವ ಡಾ.ಮೋಹನ್ ಯಾದವ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ ಅಲ್ಲದೇ ಸಂಘದ ಜೊತೆಗೆ ಗುರಿತಿಸಿಕೊಂಡಿದ್ದಾರೆ. ಅಲ್ಲದೇ ರಾಜ್ಯದ ಜನಸಂಖ್ಯೆಯ 48% ಕ್ಕಿಂತ ಹೆಚ್ಚು ಹೊಂದಿರುವ ಇತರ ಹಿಂದುಳಿದ ವರ್ಗಗಳ ಸಮುದಾಯ ಪ್ರತಿನಿಧಿಸುತ್ತಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಎನ್‌ಡಿಎ ಆಡಳಿತ ನಾಯಕರು ಭಾಗಿಯಾಗಿದ್ದರು.