ಹೈಕಮಾಂಡ್‌ಅಂಗಳವನ್ನ ತಲುಪಿರುವ ಮುಖ್ಯಮಂತ್ರಿ ವಿಚಾರದಲ್ಲಿ ಹಗ್ಗಜಗ್ಗಾಟ ಮುಂದುವರೆದಿದ್ದು, ಸಿದ್ದರಾಮಯ್ಯ ಪರ ರಾಹುಲ್‌ಗಾಂಧಿ ಒಲವು ತೋರಿದ್ದಾರೆ ಎನ್ನಲಾಗಿದೆ.ಬಹುತೇಕ ಆಟಳಿತದ ಅನುಭವವಿರುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿ ಹೈಕಮಾಂಡ್‌ಆಯ್ಕೆ ಮಾಡಲಿದೆ ಎಂದು ಹೇಳಲಾಗಿದ್ದು, ಮಂಗಳವಾರ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್‌ಖರ್ಗೆ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ಜೊತೆಗೆ ಅಂತಿಮವಾಗಿ ಚರ್ಚೆ ನಡೆಸಿ ಸಿದ್ದರಾಮಯ್ಯ ಅವರನ್ನ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.ಒಟ್ನಲಿ ಮುಂದಿನ ಲೋಕಸಭಾ ಚುನಾವಣೆ ಹಿನ್ನಲೆ ಮಂಗಳವಾರ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಹಾಗೂ ಮಲ್ಲಿಕಾರ್ಜುನ್‌ಖರ್ಗೆ ಚರ್ಚೆ ನಡೆಸಲಿದ್ದು, ಅಂತಿಮವಾಗಿ ಕಾಂಗ್ರೆಸ್ ವರಿಷ್ಠರು ಅಂತಿಮವಾಗಿ ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಿದ್ದಾರೆಂದು ಹೇಳಲಾಗಿದೆ. ಇನ್ನೂ ಹೈಕಮಾಂಡ್‌ನಾಯಕರ ಬುಲಾವ್‌ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರಾದ ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಜಮೀರ್‌ಅಹಮ್ಮದ್‌ಹಾಗೂ ಯತೀಂದ್ರ ಸಿದ್ದರಾಮಯ್ಯ ಸಾಥ್‌ನೀಡಿದ್ದಾರೆ.