ಸಿಲಿಕಾನ್‌ಸಿಟಿಯಲ್ಲಿ ಬಿಟ್ಟುಬಿಡದಂತೆ ಸುರಿಯುತ್ತಿರುವ ಮಳೆಯಿಂದಾಗಿ ಜನ ರೋಸಿ ಹೋಗಿದ್ದಾರೆ. ಬಿಬಿಎಂಪಿ ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಯುವಲ್ಲಿ ವಿಫಲವಾದ ಕಾರಣ ವೈಟ್‌ಫೀಲ್ಡ್ ಬಳಿಯ ಬೆಳತ್ತೂರಿನ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ ಪದೇ ಪದೇ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದಿದ್ದರೆ ಬಿಬಿಎಂಪಿ ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿಲ್ಲ. ತೆರೆದ ಚರಂಡಿಗಳಿಂದ ಉಂಟಾಗಿರುವ ಗುಂಡಿಗಳು ಮತ್ತು ಅಪಾಯಗಳ ಬಗ್ಗೆ ದೂರಿದ್ದಾರೆ. ತಗ್ಗು ಪ್ರದೇಶದ ರಸ್ತೆಗಳು ಮತ್ತು ಪ್ರದೇಶಗಳಲ್ಲಿ ಮಳೆ ನೀರಿನ ಪ್ರವಾಹ ಮುಂದುವರಿದಿದ್ದು ಜನ ಹೈರಾಣಾಗಿದ್ದಾರೆ. ಇದರಿಂದ ಸಂಚಾರಕ್ಕೆ ವಾಸಿಸಲೂ ಯೋಗ್ಯವಲ್ಲದ ವಾತಾವರಣ ನಿರ್ಮಾಣವಾಗಿದೆ.