ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ

ಸಿದ್ದರಾಮಯ್ಯನವರು ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ? ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ್ದಾರೆ. ದೇವಿ ದರ್ಶನ ಮಾಡಲು ಸಮಯವಿಲ್ಲ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು ಎಂದು ಹೇಳಿ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

Leave a Reply

Your email address will not be published. Required fields are marked *