ಮಹಾರಾಷ್ಟ್ರದ ಪುಣೆ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಝಿಕಾ ವೈರಸ್ ದೃಢಪಟ್ಟಿದೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬವ್‌ಧಾನ್ ಪ್ರದೇಶದಲ್ಲಿ 67 ವರ್ಷದ ವ್ಯಕ್ತಿಯೊಬ್ಬರಿಗೆ ಝಿಕಾ ವೈರಸ್ ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ನಾಸಿಕ್ ನಿವಾಸಿಯಾಗಿದ್ದು, ನವೆಂಬರ್ 6 ರಂದು ಪುಣೆಗೆ ಬಂದಿದ್ದರು. ರೋಗಿಯು ನವೆಂಬರ್ 16 ರಂದು ಜ್ವರ, ಕೆಮ್ಮು, ಕೀಲು ನೋವು ಮತ್ತು ಆಯಾಸದಿಂದ ಜಹಾಂಗೀರ್ ಆಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್ 1 ಈ ಹಿಂದೆ ಅಕ್ಟೋಬರ್ 22 ರಂದು ಅವರು ಸೂರತ್‌ಗೆ ಪ್ರಯಾಣ ಬೆಳೆಸಿದ್ದರು. ನವೆಂಬರ್ 30 ರಂದು, ಆತನಿಗೆ ಝಿಕಾ ವೈರಸ್‌ ತಗುಲಿರುವುದು ದೃಢಪಟ್ಟಿದೆ. ಸದ್ಯ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *