ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಗಲಿ ಇಂದಿಗೆ 4 ವರ್ಷ. ಬಿಜೆಪಿಗೆ ಹೊಸ ರೂಪ ಕೊಟ್ಟ ವಾಜಪೇಯಿಗೆ ಗೌರವಾರ್ಥವಾಗಿ ಬಿಜೆಪಿ ಇಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿಜಯಘಾಟ್‌ನಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪುಷ್ಪ ನಮನ ಸಲ್ಲಿಸಿದರು.