ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ

ಮಂಗಳವಾರ ದಿ. ರಾಕೇಶ್ ಸಿದ್ದರಾಮಯ್ಯ ಪುತ್ರ ಧವನ್ ರಾಕೇಶ್ ಅವರು ಸಿದ್ದರಾಮಯ್ಯ ಅವರ ಜೊತೆಗೆ ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದಾರೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಮಾತನಾಡಿ,. ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ತಿಳಿಸಿದರು. ಮೊಮ್ಮಗನಿಗೆ ಈಗಾಗಲೇ ರಾಜಕೀಯ ಟ್ರೈನಿಂಗ್ ಅನ್ನು ಸಿದ್ದರಾಮಯ್ಯ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *