ಮಾಜಿ ಸಂಸದರಾದ ಮುದ್ದಹನುಮೇಗೌಡ, ಹಾಗೂ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದರಾದ ಮುದ್ದಹನುಮೇಗೌಡ ಹಾಗೂ ಶಶಿಕುಮಾರ್ ಈ ಇಬ್ಬರು ಮುಖಂಡರು ಕೇಸರಿ ಪಾಳಯಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಈ ಇಬ್ಬರು ಮುಖಂಡರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ಕಟೀಲ್‌, ಸಚಿವರಾದ ಗೋವಿಂದ ಕಾರಜೋಳ, ಸಿ.ಪಿ.ಯೋಗಿಶ್ವರ್‌, ರಾಜ್ಯಸಭಾ ಸದಸ್ಯ ಜಗ್ಗೇಶ್, ಮಸಾಲಾ ಜಯರಾಂ ಸೇರಿದಂತೆ ಹಲವು ಪ್ರಮುಖರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ‘ಮುದ್ದಹನುಮೇಗೌಡ, ಶಶಿಕುಮಾರ್ ಅವರ ಸೇರ್ಪಡೆಯಿಂದ ಬಿಜೆಪಿಗೆ ಬಲ ಬಂದಿದೆ’ ಮುದ್ದಹನುಮೇಗೌಡ ಜನಪರ ನಾಯಕರು. ಶಶಿ ಕುಮಾರ್‌ನಮ್ಮಲ್ಲೆ ಇದ್ದವರು. ಈಗ ಮತ್ತೆ ಗೂಡಿಗೆ ಮರಳಿದ್ದಾರೆ’ ಎಂದು ಬೊಮ್ಮಾಯಿ ಹೇಳಿದರು.

Leave a Reply

Your email address will not be published. Required fields are marked *