ಮಾಲ್ಡೀವ್ಸ್‌ ರಾಜಧಾನಿ ಮಾಲೆಯಲ್ಲಿ ಭೀಕರ ಅಗ್ನಿ ದುರಂತ10 ಮಂದಿ ಸಾವನ್ನಪ್ಪಿದ್ದು – ಒಂಬತ್ತು ಮಂದಿ ಭಾರತ ಮೂಲದವರು

ಬೇರೆ ಬೇರೆ ದೇಶಗಳಿಂದ ಕೆಲಸಕ್ಕಾಗಿ ಬಂದು ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ವಾಸವಾಗಿದ್ದವರ ಇಕ್ಕಟ್ಟಾದ ವಸತಿಗೃಹಗಳ ನೆಲ ಮಹಡಿಯಲ್ಲಿ ವಾಹನಗಳನ್ನು ರಿಪೇರಿ ಮಾಡುವ ಗ್ಯಾರೇಜ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು ಮಹಡಿಯಿಂದ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತರಲ್ಲಿ ಒಂಬತ್ತು ಮಂದಿ ಭಾರತ ಮೂಲದವಾರಗಿದ್ದು, ಓರ್ವ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಕುರಿತಂತೆ ಮಾಲ್ಡೀವ್ಸ್‍ನಲ್ಲಿರುವ ಭಾರತದ ಹೈಕಮಿಷನ್ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದೆ. ನಾವು ಮಾಲ್ಡೀವ್ಸ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಹೈಕಮಿಷನ್ ಟ್ವೀಟ್ ಮಾಡಿದೆ.

Leave a Reply

Your email address will not be published. Required fields are marked *