ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿರುವ, ಮುಂದಿನ ಶೈಕ್ಷಣಿಕ ವರ್ಷದ ಶಾಲೆ ಆರಂಭವಾದಾಗ ಎಲ್ಲ ತಾಲೂಕುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಮಿನಿ ಬಸ್ ಸೇವೆ ಆರಂಭವಾಗಬೇಕು. ಕನಿಷ್ಠ 3-5 ಹೊಸ ಬಸ್ ಸಂಚರಿಸಬೇಕು. ಈ ಮೂಲಕ ಎಲ್ಲೆಡೆ ಮಿನಿ ಶಾಲೆ ಬಸ್ ಗಳನ್ನು ಪರಿಚಯಿಸಬೇಕು. ನಿಮ್ಮ ಬಳಿ ಇದ್ದರೆ ಓಡಿಸಿ, ಇಲ್ಲದಿದ್ರೆ ಗುತ್ತಿಗೆ ಪಡೆಯಿರಿ. ಅಗತ್ಯ ಬಿದ್ದರೆ ಇನ್ನಷ್ಟು ಶೆಡ್ಯೂಲ್ ಮಾಡಲು ಸಹಕಾರ ನೀಡಲಾಗುತ್ತೆ. ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಆರಂಭವಾಗಲಿದೆ. ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.