ಮುಂದಿನ 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಜನರನ್ನು ಅಚ್ಚರಿಗೊಳಿಸಲಿದೆ: ರಾಹುಲ್ ಗಾಂಧಿ

ಮೂರು ನಗರಗಳ ಅಮೆರಿಕ ಪ್ರವಾಸಕ್ಕಾಗಿ ಅಮೆರಿಕದಲ್ಲಿರುವ ರಾಹುಲ್ ಗಾಂಧಿ, ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮದವರೊಂದಿಗೆ ನಡೆಸಿದ ಸಂವಾದದ ವೇಳೆ ಪ್ರಶ್ನೆಗಳ ಸರಣಿಗೆ ಉತ್ತರವಾಗಿ ಮುಂದಿನ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಅದು ಆಗಿಯೇ ಆಗುತ್ತದೆ ಎಂದು ನಾನು ಭಾವಿಸುತ್ತೇನೆ. ವಿರೋಧ ಪಕ್ಷಗಳು ಒಂದಾಗಿದ್ದು, ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಮುಂದಿನ ಚುನಾವಣಾ ಫಲಿತಾಂಶ ಜನರನ್ನು ಅಚ್ಚರಿಗೊಳಿಸಲಿದೆ. ” ಇನ್ನು, ಕಾಂಗ್ರೆಸ್‌ಗೆ ಬಹುಮತ ದೊರೆತು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಉದಾಹರಣೆಯಾಗಿ ನೀಡಿರುವ ಅವರು, “ಮುಂದಿನ ಮೂರ್ನಾಲ್ಕು ರಾಜ್ಯಗಳ ಚುನಾವಣೆಗಳನ್ನು ಕಾದು ನೋಡಿ. ಏನಾಗಲಿದೆ ಎಂಬುದರ ಉತ್ತಮ ಸೂಚನೆ ಕಾಣುತ್ತಿದೆ” ಎಂದು ಪತ್ರಕರ್ತರಿಗೆ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಭಾರತದಲ್ಲಿ ಪ್ರತಿಪಕ್ಷಗಳು ಉತ್ತಮವಾಗಿ ಒಗ್ಗೂಡಿವೆ. ಹೆಚ್ಚು ಹೆಚ್ಚು ಒಗ್ಗೂಡುತ್ತಿದೆ ಎಂದು ನಾನು ಭಾವಿಸುತ್ತೇನೆ. ನಾವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಸಾಕಷ್ಟು ಒಳ್ಳೆಯ ಕೆಲಸ ನಡೆಯುತ್ತಿದೆ. ಇದು ಸಂಕೀರ್ಣವಾದ ಚರ್ಚೆ ಕೂಡ ಹೌದು. ಏಕೆಂದರೆ ನಾವು ಇತರ ವಿರೋಧ ಪಕ್ಷಗಳೊಂದಿಗೆ ಬೇರೆ ಬೇರೆ ಸ್ಥಳಗಳಲ್ಲಿ ಸ್ಪರ್ಧಿಸುತ್ತೇವೆ. ಆದ್ದರಿಂದ, ಇದು ಸ್ವಲ್ಪ ಕೊಡು ಮತ್ತು ತೆಗೆದುಕೊಳ್ಳುವುದೆ ನಡುವೆಯಿದೆ. ಆದರೂ ಒಗ್ಗಟ್ಟು ನಡೆಯಲಿದೆ ಎಂದು ನನಗೆ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *