ಮುಂದಿನ 5 ವರ್ಷಗಳಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ: ಸಿಎಂ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ಇತ್ತೀಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು.ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ ಎಂದು ಹೇಳಿದರು.ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಅಂತ. ಆದರೆ ಹಾಗಾಗುವುದಿಲ್ಲ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಆಮೇಲೆ ಅನುಭವಿಸುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು. ಸಮುದಾಯಗಳು ಮುನ್ನಡೆಸಲಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷದ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 2017 ರಲ್ಲಿ ಏಡ್ಸ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ ಎಂದರು.ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಟ ಪ್ರೇಮ್, ನಟಿ ಸಂಜನಾ ಗಲ್ರಾನಿ ಸೇರಿ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

Leave a Reply

Your email address will not be published. Required fields are marked *