ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25 ಸ್ಥಾನ ಗೆಲ್ಲಬೇಕು- ಕೈ ನಾಯಕರಿಗೆ ಹೈಕಮಾಂಡ್ ಬಿಗ್ ಟಾಸ್ಕ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ 50ಕ್ಕೂ ಹೆಚ್ಚು ನಾಯಕರು ಪಾಲ್ಗೊಂಡಿದ್ರು. ಜನ ನಮ್ಮ ಪರವಾಗಿದ್ದಾರೆ. ಜನ ನಮ್ಮ ಪರವಾಗಿರ್ತಾರೆ ಎನ್ನುವುದಕ್ಕೆ ವಿಧಾನಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ. ಈ ನಿಟ್ಟಿನಲ್ಲಿ ಕೆಲಸ ಮಾಡಿ. ಕಾಂಗ್ರೆಸ್ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಿ. ಜನ ಯಾವುದೇ ಕಾರಣಕ್ಕೂ ನಮ್ಮ ಕೈಬಿಡುವುದಿಲ್ಲ ಎಂದು ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದರು. ವಿಪಕ್ಷಗಳ ಟೀಕೆಗೆ ಗಮನ ಕೊಡದೇ ಮುಂದುವರಿಯಿರಿ ಎಂದು ಸಲಹೆ ನೀಡಿದ್ರು. ಈ ಸಂದರ್ಭದಲ್ಲಿ ಮಾತಾಡಿದ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ನಾಯಕತ್ವ ಇಲ್ಲದ ಮನೆಯಾಗಿದೆ. ಇದೇ ಅವಕಾಶ ಬಳಸಿಕೊಂಡು ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕು. ಗ್ಯಾರಂಟಿಗಳ ಮೂಲಕ ಜನರನ್ನು ರೀಚ್ ಆಗಬಹುದು. ಇದು ಲೋಕಸಮರದಲ್ಲೂ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿದೆ ಅಂತಾ ಅಭಿಪ್ರಾಯಪಟ್ರು. ನಂತರ ಎರಡನೇ ಸಭೆಯನ್ನು ಸಚಿವರೊಂದಿಗೆ ಹೈಕಮಾಂಡ್ ಪ್ರತ್ಯೇಕವಾಗಿ ನಡೆಸಿತು. ಈ ಸಂದರ್ಭದಲ್ಲಿ ಸಚಿವರಿಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಭ್ರಷ್ಟಾಚಾರದ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಎಚ್ಚರಿಕೆ ನೀಡಿದ್ರು. ಸಚಿವರು ಕಾರ್ಯಾಧ್ಯಕ್ಷ ಸ್ಥಾನಗಳಿಗೆ ರಾಜೀನಾಮೆ ಕೊಡ್ಬೇಕು ಎಂದು ಸೂಚಿಸಿದರು. ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಹೈಕಮಾಂಡ್ ನಾಯಕರು ಸಭೆ ಮೇಲೆ ಸಭೆ ನಡೆಸಿದ್ದಾರೆ.

Leave a Reply

Your email address will not be published. Required fields are marked *