ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು 3ನೆಯ ಡೋಸ್‌ಕೊಡಲು ಹೆಚ್ಚಿನ ಒತ್ತು ನೀಡಲಾಗುವುದು. 3ನೆಯ ಡೋಸ್‌ತೆಗೆದುಕೊಳ್ಳದವರ ಮೇಲೆ ನಿಗಾ ಇಡುತ್ತೇವೆ. ಮಕ್ಕಳಿಗೂ ಲಸಿಕೆ ನೀಡಲಾಗುವುದು ಜಪಾನ್, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಈ ಸಂಬಂಧ ಈಗಾಗಲೇ ಮುಖ್ಯಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯಾವ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಿದ್ದೇವೆ. ಎಂದು ಹೇಳಿದರು.