ಇತ್ತೀಚೆಗೆ ಸುರಿದ ಮಳೆಯಿಂದಾಗಿ ಬೆಂಗಳೂರಲ್ಲಿ ಅನೇಕ ಕಡೆ ರಸ್ತೆ, ಬಡಾವಣೆ ಅಸ್ತವ್ಯಸ್ತವಾಗಿತ್ತು. ನಂತರ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿಯ ಪ್ರದೇಶಗಳನ್ನು ಗುರುತಿಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಅದರಂತೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್ ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಒತ್ತುವರಿಯಾಗಿದ್ದ ಕಟ್ಟಡಗಳು, ಮನೆ, ಕಾಪೌಂಡುಗಳು ನೆಲಸಮವಾಗಿವೆ. ಎಂದು ಬಿಬಿಎಂಪಿ ತಿಳಿಸಿದೆ.