ನವದೆಹಲಿಯಲ್ಲಿ ಖರ್ಗೆ ನಿವಾಸಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ರಾಜೀನಾಮೆ ನೀಡಲ್ಲ. ಇದೆಲ್ಲ ಸುಳ್ಳು. ಕಾಂಗ್ರೆಸ್ ಪಕ್ಷ ನನ್ನ ತಾಯಿ ಇದ್ದಂತೆ. ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಕುರ್ಚಿಗೆ ಭಾರೀ ಫೈಟ್ ನಡೆಯುತ್ತಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ಇಬ್ಬರು ನಾಯಕರೂ ಕೂಡ ದೆಹಲಿ ತಲುಪಿದ್ದು, ಇಂದು ಸಂಜೆಯೇ ಸಿಎಂ ಯಾರೆಂದು ಅನೌನ್ಸ್ ಮಾಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ.