ಮಂತ್ರಾಲಯ ರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆಯಲು ಕುಟುಂಬ ಸಮೇತ ತೆರಳಿದ್ದ ಯಡಿಯೂರಪ್ಪನವರು. ಮುಖ್ಯಮಂತ್ರಿ ಸ್ಥಾನದಿಂದ ಬಿಜೆಪಿ ಹೈಕಮಾಂಡ್ ಬಲವಂತದಿಂದ ಕೆಳಗಿಳಿಸಿದರು ಎನ್ನುವ ಸುದ್ದಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಯನ್ನು ನೀಡಿದ್ದಾರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನನಗೆ ಯಾವುದೇ ಒತ್ತಡವಿರಲಿಲ್ಲ., “ನಾನು ಅತ್ಯಂತ ಸ್ಪಷ್ಟವಾಗಿ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದೇನೆ, ನಾನೇ ಸ್ವಇಚ್ಚೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು.