ಈ ಬಾರಿ 72.81% ಮತದಾನ ನಡೆದಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ನಡೆಯುತ್ತಿದೆ. ಎಕ್ಸಿಟ್ ಪೋಲ್‌ನ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕರೆ, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಕೆಲವು ಸಮೀಕ್ಷೆಗಳಲ್ಲಿ ಅಂತ್ರವಾಗಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರಬಹುದು ಎಂದು ಹೇಳಲಾಗುತ್ತಿದೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಈ ನಡುವೆ ಮತಗಟ್ಟೆಗಳಲ್ಲಿ ನಡೆದ ಸಮೀಕ್ಷೆಯಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ಕಾಂಗ್ರೆಸ್‌ನಲ್ಲಿ ನಾಯಕರೂ ಸಹ ಲೆಕ್ಕಾಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಅವರ ಲೆಕ್ಕದಲ್ಲಿ ಕಾಂಗ್ರೆಸ್ 130+, ಬಿಜೆಪಿ 65+, ಜೆಡಿಎಸ್ 22+, ಇತರೆ 3 ಸ್ಥಾನ ಬಂದರೆ, ಡಿಕೆಶಿ ಲೆಕ್ಕಚಾರದಲ್ಲಿ ಕಾಂಗ್ರೆಸ್ 141+, ಬಿಜೆಪಿ 60+, ಜೆಡಿಎಸ್ 20+, ಇತರೆ 2+ ಸ್ಥಾನಗಳು ಬರಲಿವೆ. ಇಬ್ಬರು ಕಾಂಗ್ರೆಸ್ ನಾಯಕರ ಲೆಕ್ಕಾಚಾರದಲ್ಲೂ ಕಾಂಗ್ರೆಸ್ ಸರ್ಕಾರ ರಚಿಸುವುದು ಖಚಿತವಾಗಿದ್ದು, ಫಲಿತಾಂಶ ಕಾದುನೋಡಬೇಕಿದೆ.