ಮುರುಘಾ ಮಠದ ಸ್ವಾಜೀಜಿಗಳಾದ ಶಿವಮೂರ್ತಿ ಮುರುಗ ಶರಣರು ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಮೂರುವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ. ಇವರಿಗೆ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿಗಳಾದ ಬಸವಾದಿತ್ಯ , ಲಾಯರ್ ಗಂಗಾಧರಯ್ಯ, ಲೀಡರ್ ಪರಮ ಶಿವಯ್ಯ ಸಹಾಯವನ್ನು ಮಾಡಿರುತ್ತಾರೆ ಎಂದು ಚಂದ್ರಶೇಖರ್ ಎಂಬುವವರು ದೂರನ್ನು ನೀಡಿದ್ದಾರೆ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿರುತ್ತಾರೆ. ಮಕ್ಕಳ ಹೇಳಿಕೆಯನ್ನು ಪಡೆದಿರುವ ವೇಳೆ ಲೈಂಗಿಕ ದೌರ್ಜನ್ಯ ನೀಡಿರುವುದು ತಿಳಿದು ಬಂದಿರುತ್ತದೆ. ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದ್ದು ಮಕ್ಕಳಿಗೆ ತಾತ್ಕಾಲಿಕವಾಗಿ ಒಡನಾಡಿ ಸಂಸ್ಥೆಯಲ್ಲಿ ವಸತಿಯನ್ನು ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.