ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣ: ನ್ಯಾಯಾಧೀಶರ ಎದುರು ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲು

ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ನ್ಯಾಯಾಧೀಶರ ಎದುರು ಬಾಲಕಿಯರ ಸಿಆರ್‌ಪಿಸಿ 164ರ ಅನ್ವತ ಹೇಳಿಕೆ ದಾಖಲಿಸಲಾಗಿದೆ.
ಮುರುಘಾ ಮಠದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮುರುಘಾ ಶರಣರು ತನ್ನಿಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಕ್ಟೋಬರ್ 14ರಂದು ಮೈಸೂರಿನಲ್ಲಿ ದೂರು ನೀಡಿದ್ದರು. ಆ ದೂರಿನನ್ವಯ ಮಂಗಳವಾರ ಸಂತ್ರಸ್ತ ಬಾಲಕಿಯರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರ ಮುಂದೆ ಬಾಲಕಿಯರು ಹೇಳಿಕೆಗಳನ್ನು ದಾಖಲಿಸಿದ್ದಾರೆ.
ಈಗಾಗಲೆ ಸೆಪ್ಟೆಂಬರ್‌ನಲ್ಲಿ ಮುರುಘಾ ಶರಣರ ವಿರುದ್ಧ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇನ್ನೂ ಜಾಮೀನು ಸಿಗದೇ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಇದೀಗ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು ಮತ್ತೊಂದು ಸಂಕಷ್ಟ ಎದುರಾಗಿದೆ.

Leave a Reply

Your email address will not be published. Required fields are marked *