ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರನ್ನು ಒಲೈಸಿಕೊಳ್ಳುವ ಪ್ರಯತ್ನದಲ್ಲಿ ಒಬಿಸಿ ಕೋಟಾದಡಿಯಲ್ಲಿ ಶೇಕಡಾ 4 ರಷ್ಟು ಮೀಸಲಾತಿ ಪಡೆಯುತ್ತಿದ್ದ ಮುಸ್ಲಿಮರ ಮೀಸಲಾತಿ ರದ್ದುಗೊಳಿದೆ. ಅದನ್ನು ಎರಡು ಸಮುದಾಯಗಳಿಗೆ ಸಮಾನವಾಗಿ ಹಂಚಿದೆ. ಮುಸ್ಲಿಮರನ್ನು ಶೇಕಡಾ 10 ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವಿಭಾಗ ಅಡಿಯಲ್ಲಿ ಸೇರಿಸಿದೆ.
ಈ ಬಗ್ಗೆ ಕಿಡಿ ಕಾರಿರುವ ಸಿದ್ದರಾಮಯ್ಯ ಅವರು, “ಜಾತಿ-ಧರ್ಮಗಳ ನಡುವೆ ಜಗಳ ಹಚ್ಚಿ ಚುನಾವಣೆಯಲ್ಲಿ ಲಾಭ ಗಳಿಸುವ ದುರುದ್ದೇಶದ, ತಪ್ಪು ಮಾಹಿತಿ ಆಧರಿಸಿದ ಮತ್ತು ಸಂವಿಧಾನ ವಿರೋಧಿಯಾದ ಪರಿಷ್ಕೃತ ಮೀಸಲಾತಿಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು. ಚುನಾವಣೆ ಘೋಷಣೆಗೆ ದಿನ ಎಣಿಕೆ ನಡೆಯುತ್ತಿರುವಾಗ ಅವಸರದಲ್ಲಿ ಪ್ರಕಟಿಸಲಾಗಿರುವ ಮೀಸಲಾತಿ ನೀತಿ ದೋಷಪೂರ್ಣವಾಗಿದೆ” ಎಂದಿದ್ದಾರೆ.