ಮುಸ್ಲಿಂ’ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು – ಸಿದ್ದರಾಮಯ್ಯ ಹೇಳಿಕೆ ಫುಲ್ ವೈರಲ್

ಮಂಗಳವಾರ ಶಿವಮೊಗ್ಗ ಗಲಭೆ ಸಂಬಂಧ ಮಾಜಿ ಸಚಿವ ಈಶ್ವರಪ್ಪನವರು ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಬಳಿಕ ಘಟನೆಯನ್ನು ಖಂಡಿಸುವಾಗ ಇವತ್ತಿನ ಪರಿಸ್ಥಿತಿಗೆ ಸಿದ್ದರಾಮಯ್ಯ, ಡಿಕೆಶಿ ಕಾರಣ ಅಂತ ಈಶ್ವರಪ್ಪ ಟೀಕಿಸಿದ್ದರು. ಇದಕ್ಕೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ, ಈ ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ. ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಅನ್ನೋದು, ಸುಳ್ಳು ಹೇಳುವುದು, ಹಬ್ಬಿಸುವುದು. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದ್ರೆ ಟಿಪ್ಪು ಫೋಟೋ ತೆಗೀತಾರೆ. ಹೀಗೆ ಮಾಡಿದ್ರೆ ಗಲಭೆ ಆಗಲ್ವಾ. ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕ್ತಾರೆ. ಮಗೂನು ಚಿವುಟುತ್ತಾರೆ ತೊಟ್ಟಿಲು ತೂಗ್ತಾರೆ.

Leave a Reply

Your email address will not be published. Required fields are marked *