ಮೆಟ್ರೋ ಕಾಮಗಾರಿಗೆ ಸಂಬಂಧಿಸಿದಂತೆ ಇದುವರೆಗೂ 50 ಜನ ಅಪಘಾತಕ್ಕೊಳಗಾಗಿದ್ದಾರೆ. ಅದರಲ್ಲಿ 38 ಜನರು ಮೃತಪಟ್ಟಿದ್ದಾರೆ. ಅವಘಡಗಳಿಂದ ಮೃತಪಟ್ಟವರ ಕುಟುಂಬಗಳಿಗೆ 3.15 ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲಾಗಿದೆ. ಅವಘಡಕ್ಕೆ ಕಾರಣರಾದ ಮೂರು ಎಂಜಿನಿಯರ್ಗಳನ್ನು ಅಮಾನತು ಮಾಡಲಾಗಿದೆ. ಗುತ್ತಿಗೆದಾರರಿಗೆ 1.17 ಕೋಟಿ ರೂ.ಗಳನ್ನು ದಂಡ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಪರಿಷತ್ನಲ್ಲಿ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯರೊಬ್ಬರ ಪ್ರಶ್ನೆಗೆ ಅವರು ಉತ್ತರಿಸುವಾಗ, ಇದುವರೆಗೂ ಆದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ವಿವಿಧ ಅನಾಹುತಗಳಿಂದ ಆದ ಸಾವು ನೋವುಗಳು, ನೀಡಲಾದ ಪರಿಹಾರ ಹಾಗೂ ಜರುಗಿಸಲಾದ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.ಅವಘಡಗಳನ್ನು ತಪ್ಪಿಸಲು ಹೆಣ್ಣೂರು ಮೆಟ್ರೋ ಪಿಲ್ಲರ್ ದುರಂತದ ಬಳಿಕ ತೆಗೆದುಕೊಂಡ ಕ್ರಮಗಳು ಮತ್ತು ಕೈಪಿಡಿ ಪ್ರಕಾರವೇ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.