ಬುಧವಾರ ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ, ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಅವರು ತಿಳಿಸಿದರು.ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. 5-6 ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.