ಜೆಡಿಎಸ್ ಪರ ಪ್ರಚಾರ ಕೈಗೊಳ್ಳಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ರಾಜ್ಯಕ್ಕೆ ಆಗಮಿಸಲಿದ್ದಾರೆ.ಮತದಾನಕ್ಕೆ ಸಮೀಪ ಇರುವ ದಿನದಲ್ಲಿ ಪಕ್ಷದ ಮೂಲಗಳ ಪ್ರಕಾರ ಮೇ ಮೊದಲ ವಾರದಲ್ಲಿ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ. ಇಬ್ಬರು ಮುಖಂಡರು ರಾಜ್ಯಕ್ಕೆ ಬಂದು ಜೆಡಿಎಸ್ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಮತಾ ಬ್ಯಾನರ್ಜಿ ಅವರು ಬೆಂಗಳೂರು, ಮೈಸೂರು ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳುವ ನಿರೀಕ್ಷೆ ಇದೆ. ಅಂತೆಯೇ ಕೆ. ಚಂದ್ರಶೇಖರ್ ರಾವ್ ಅವರು ಚಿಕ್ಕಬಳ್ಳಾಪುರ, ಕೋಲಾರ ಸುತ್ತಮುತ್ತ ಜಿಲ್ಲೆಗಳ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೀಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಸಹ ಕರೆಸುವ ಚಿಂತನೆಯೂ ನಡೆಯುತ್ತಿದೆ ಎನ್ನಲಾಗಿದೆ.