ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ. ನಟರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ. ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ.ನಾಳೆ ವಿಧಾನ ಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಈ ವೇಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಮ್ ಡಿಕೆ. ಶಿವಕುಮಾರ್ ಹಾಗೂ ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ.