ಮೋದಿಯನ್ನು ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಸಿಲುಕಿಸುವಂತೆ ನನ್ನ ಮೇಲೆ ಸಿಬಿಐ ಒತ್ತಡ ಹೇರಿತ್ತು: ಅಮಿತ್ ಶಾ

ನರೇಂದ್ರ ಮೋದಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರಪಯೋಗಪಡಿಸಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಪಾದಿತ ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಿತ್ತು. ಆದರೂ ಬಿಜೆಪಿ ಎಂದಿಗೂ ಗದ್ದಲ ಎಬ್ಬಿಸಲಿಲ್ಲ. ಮೋದಿ ಹೆಸರನ್ನು ಹೇಳುವಂತೆ ನನ್ನ ವಿರುದ್ಧ ಸಿಬಿಐ ಒತ್ತಡ ಹೇರಿತ್ತು. ಮೋದಿ ಹೆಸರನ್ನು ಹೇಳಿದರೆ ನನ್ನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಆದರೆ ನಾನು ಮೋದಿ ಹೆಸರನ್ನು ಹೇಳದ ಕಾರಣ ಜೈಲಿಗೆ ಹೋಗಬೇಕಾಯಿತು.ಸೂರತ್‍ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸಿದೆ. ಆದರೆ ರಾಹುಲ್ ಗಾಂಧಿ ಅವರು ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕಾಂಗದ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. ಆದರೆ ರಾಹುಲ್ ಗಾಂಧಿ ಒಬ್ಬರೇ ಶಾಸಕಾಂಗದ ಸದಸ್ಯತ್ವವನ್ನು ಕಳೆದುಕೊಂಡ ಏಕೈಕ ರಾಜಕಾರಣಿ. ರಾಹುಲ್ ಗಾಂಧಿ ಅವರು ಉನ್ನತ ನ್ಯಾಯಾಲಯದ ಮೊರೆ ಹೋಗುವ ಬದಲು ತಮ್ಮ ಅಳಲನ್ನು ತೋಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ಭವಿಷ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಜನರಲ್ಲಿ ತಪ್ಪು ಕಲ್ಪನೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *