ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 21, 22ರಂದು ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ ನಮ್ಮೆಲ್ಲಾ ಸಚಿವ ಸಂಪುಟದ ಸಹೋದ್ಯೋಗಿಗಳು, ಹಿರಿಯ ನಾಯಕ ಸದಾನಂದಗೌಡರು, ಎಲ್ಲಾ ಶಾಸಕರು ಶ್ರಮವಹಿಸುತ್ತಿದ್ದಾರೆ. ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಿದ್ದಾರೆ. ಬಿಬಿಎಂಪಿ, ಬಿಡಿಎ, ಜಿಲ್ಲಾಧಿಕಾರಿಗಳು ಮತ್ತು ಭದ್ರತಾ ದೃಷ್ಟಿಯಿಂದ ಕರ್ನಾಟಕ ಪೊಲೀಸ್, ಬೆಂಗಳೂರು ಆಯುಕ್ತರು ಸೇರಿದಂತೆ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಸ್‌ಪಿಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published.