ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಬ್ರಿಟನ್‌ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದಿಂದ 18-30 ವರ್ಷ ವಯಸ್ಸಿನ ಪದವಿ-ಶಿಕ್ಷಿತ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಕಳೆದ ತಿಂಗಳು ಭಾರತೀಯ ಮೂಲದ ವ್ಯಕ್ತಿಯೊಬ್ಬರು ಬ್ರಿಟಿಷ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಸಭೆಯಾಗಿದೆ.