ಗುಜರಾತ್ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕರ್ನಾಟಕದ ಮೇಲೆ ಗಮನ ಹರಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಸೂಚಿಸಿದೆ. ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೆ ಒಮ್ಮೆ ಕರ್ನಾಟಕ ಭೇಟಿಗೆ ನಿರ್ಧರಿಸಿದ್ದು, ಕೇಂದ್ರ ಸಚಿವರು ನಿರಂತರ ಭೇಟಿಗೆ ತಿರ್ಮಾನಿಸಿದ್ದಾರೆ. ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರ್ನಾಟಕ ನಮ್ಮ ಮುಂದಿನ ಗುರಿ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ನರೇಂದ್ರ ಮೋದಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.