ನರೇಂದ್ರ ದಾಮೋದರ್ ದಾಸ್ ಮೋದಿ ಎನ್ನುವ ಬದಲು ನರೇಂದ್ರ ಗೌತಂದಾಸ್ ಮೋದಿ ಎಂದು ಹೇಳಿರುವ ಕಾರಣಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿತು. ಕಾರಣಕ್ಕಾಗಿ ಬಂಧಿತರಾಗಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ಸುಪ್ರೀಂ ಕೋರ್ಟ್ ದೆಹಲಿ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಎಫ್‌ಐಆರ್‌ಗಳನ್ನು ಸೇರಿಸುವ ಖೇರಾ ಅವರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಅಸ್ಸಾಂ ಮತ್ತು ಯುಪಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಖೇರಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಅವರ ತಪ್ಪಿನಿಂದ ಅವರು ಕ್ಷಮೆ ಕೇಳಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ಸಿಂಘ್ವಿ ಹೇಳಿದ್ದಾರೆ.