ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟ್‌ರಂತೆ ವರ್ತಿಸ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡುವುದು ಸರಿಯಲ್ಲ ದಾವಣಗೆರೆಯಲ್ಲಿ ಮಾರ್ಚ್‌ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ಹೇಳಿದರು.