ಚುನಾವಣಾ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನ ಮರಳಿ ಅಧಿಕಾರಕ್ಕೆ ತರಲು ಪ್ರಯತ್ನ ನಡೆಸುತ್ತಿದ್ದು, ರಾಜ್ಯಾದ್ಯಂತ ಪ್ರವಾಸವನ್ನ ಕೈಗೊಂಡಿದ್ದಾರೆ. ಇತ್ತ ಬಿ ಎಸ್‌ಯಡಿಯೂರಪ್ಪ ಅವರು ಜೈಲಿಗೆ ಕಳುಹಿಸಿದ ವಿಚಾರ ಚುನಾವಣೆ ಹೊತ್ತಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕರ್ನಾಟಕದಲ್ಲಿ ನೆಲೆಯೇ ಇಲ್ಲದ ಬಿಜೆಪಿಯನ್ನ ಅಧಿಕಾರಕ್ಕೆ ತಂದಿದ್ದು ಲಿಂಗಾಯತ ನಾಯಕ ಯಡಿಯೂರಪ್ಪ ಅವರನ್ನ ಜೈಲಿಗೆ ಕಳುಹಿಸಿದ್ದು ಆರ್‌ಎಸ್‌ಎಸ್‌ನ ವಿಘ್ನ ಸಂತೋಷಿಗಳೇ ಹೊರೆತು ಕಾಂಗ್ರೆಸ್‌ಪಕ್ಷವಲ್ಲ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.