ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು, ಯಡಿಯೂರಪ್ಪನ ಮೇಲೆ ಕಾಂಗ್ರೆಸ್‌ನವರು ಪ್ರೀತಿ ತೋರಿಸುತ್ತಿದ್ದಾರೆ. ಹಿಂದೆ ಜನಾರ್ದನ್ ರೆಡ್ಡಿ, ಯಡಿಯೂರಪ್ಪ ಅವರನ್ನ ಜೈಲಿಗೆ ಕಳುಹಿಸಿದ್ದು ಜೈಲಿಗೆ ಹೋಗೋದಕ್ಕೆ ಸೂತ್ರಧಾರರೇ ಕಾಂಗ್ರೆಸ್ ನವರು. ಅವರಿಂದಲೇ ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಆರೋಪಿಸಿದರು.ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ತಾಂಡಾದವರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ನಡೆಯಲಿದೆ. 40 ನಾಯಕರು ವಿವಿಧೆಡೆ ನಮ್ಮ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಇನ್ನು ಮುಂದಿನ ಬಿಜೆಪಿ ಸಭೆ, ಸಮಾರಂಭಗಳು ಅತಿ ಹೆಚ್ಚು ಶಾಸಕತ್ವದೊಂದಿಗೆ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಬಿಜೆಪಿ ಅಶ್ವಮೇಧ ಆರಂಭವಾಗಿದೆ. ರಾಜ್ಯದಾದ್ಯಂತ ಬಿಜೆಪಿ ಹವಾ ಇದೆ. ನಮ್ಮಲ್ಲಿ ಲೀಡರ್‍ಶಿಪ್ ಇದೆ. ಕಾಂಗ್ರೆಸ್ ಅವರಲ್ಲಿ ಗುಂಪುಗಾರಿಕೆ ಇದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ.